ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಕೆ - Mahanayaka
6:21 PM Saturday 21 - September 2024

ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಕೆ

bill
01/04/2024

ಬೆಂಗಳೂರು:  ಲೋಕಸಭಾ ಚುನಾವಣೆ ಸಂದರ್ಭದಲ್ಲೇ ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ ಗುಡ್ ನ್ಯೂಸ್ ನೀಡಿದೆ.

ಗೃಹ ಬಳಕೆಯಲ್ಲಿ 100 ಯುನಿಟ್ ​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಏಪ್ರಿಲ್ 1 ರಿಂದಲೇ ಜಾರಿಯಾಗಿದ್ದು, ಎಲ್ಲ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಲಾಗಿದೆ.

100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಆದರೆ ಇದೀಗ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.


Provided by

ವಿದ್ಯುತ್ ಕಡಿತದ ಬಿಲ್ ಏಪ್ರಿಲ್ ನಲ್ಲಿ ಬರುವ ಬಿಲ್ ನಲ್ಲಿ ಬರುವುದಿಲ್ಲ, ಮೇ ತಿಂಗಳಿನಲ್ಲಿ ಬರುವ ಬಿಲ್ ​ನಲ್ಲಿ ಈ ದರ ಅನ್ವಯವಾಗಲಿದೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ