SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆ ವೇಳೆ ಉಚಿತ ಬಸ್ ಪ್ರಯಾಣ

26/02/2025
ಬೆಂಗಳೂರು: SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ವೇಳೆ ಉಚಿತ ಬಸ್ ಪ್ರಯಾಣ ಒದಗಿಸುವುದಾಗಿ KSRTC ಘೋಷಿಸಿದೆ.
SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಅವಕಾಶ ನೀಡಲು ನಿರ್ಧರಿಸಿರುವುದಾಗಿ ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮತ್ತು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ SSLC ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಪ್ರಸ್ತುತಪಡಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: