ಗೂಡ್ಸ್ ರಿಕ್ಷಾ—ಕಾರಿನ ನಡುವೆ ಅಪಘಾತ: ರಿಕ್ಷಾ ಚಾಲಕ ಸಾವು
ಬ್ರಹ್ಮಾವರ: ಗೂಡ್ಸ್ ರಿಕ್ಷಾ ಮತ್ತು ಕಾರಿನ ಮಧ್ಯೆ ಬ್ರಹ್ಮಾವರ ಆಕಾಶವಾಣಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.27ರಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕುಂದಾಪುರ ಕಂಡ್ಲೂರಿನ ಜೈನುಲ್ಲಾ ಅಬಿದಿನ್(63) ಮೃತ ದುದೈರ್ವಿ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ರಿಕ್ಷಾ, ಯಾವುದೇ ಸೂಚನೆ ಯನ್ನು ನೀಡದೇ ಯೂಟರ್ನ್ ಪಡೆದಿದ್ದು, ಇದೇ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು.
ಇದರಿಂದ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ ಜೈನುಲ್ಲಾ ಅಬಿದಿನ್ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw