ಅಂಡರ್ ಪಾಸ್ ಗಳಲ್ಲಿ ಮಳೆ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ನಿರ್ಧಾರಿಸಿದ ಸರ್ಕಾರ!
ಬೆಂಗಳೂರು: ಹಾಗೂ ಇತರೆ ನಗರಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ಮಾಡಲು ಕಾರ್ಯಯೋಜನೆ ರೂಪಿಸಬೇಕಿದೆ. ಮುಖ್ಯಮಂತ್ರಿಗಳು, ಬಿಬಿಎಂಪಿ ಆಯುಕ್ತರು, ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂಡರ್ ಪಾಸ್ ಗಳಲ್ಲಿ ನೀರು ಹೋಗದಂತೆ ತಡೆಯಬೇಕಿದ್ದು ಇದಕ್ಕೆ ಶಾಶ್ವತ ಯೋಜನೆ ರೂಪಿಸಬೇಕು. ಇದಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಇಂತಹ ಅಂಡರ್ ಪಾಸ್ ಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ತಡೆಯಬೇಕಿದೆ. ಇನ್ನು ಇಂತಹ ಅಂಡರ್ ಪಾಸ್ ಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಲಾಗುವುದು.
ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಪರಿಸ್ಥಿತಿಯಲ್ಲಿ ಯಾವರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿ ಯೋಜನೆ ರೂಪಿಸಲಾಗುವುದು. ಈ ಘಟನೆಯಲ್ಲಿ ಸಾವಿನ ದವಡೆಯಲ್ಲಿದ್ದ ನಾಲ್ಕೈದು ಮಂದಿಯನ್ನು ರಕ್ಷಣೆ ಮಾಡಿದ ಮಾಧ್ಯಮದವರು, ಸಾರ್ವಜನಿಕರು ಹಾಗೂ ಪೊಲೀಸರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ಇಲ್ಲಿ ಪರಿಹಾರ ನೀಡಿಕೆ ಪ್ರಮುಖ ವಿಚಾರ ಅಲ್ಲ. ಮುಂದೆ ಇಂತಹ ಘಟನೆ ಆಗದಂತೆ ತಡೆಯಬೇಕು.
ಜನರಿಗೆ ಅನುಕೂಲವಾಗಲಿ ಎಂದು ಅಂಡರ್ ಪಾಸ್ ಮಾಡಲಾಗಿದ್ದು, ಇಂತಹ ದುರ್ಘಟನೆ ಮುಂದೆ ರಾಜ್ಯದಲ್ಲಿ ಆಗದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಈ ಘಟನೆ ಕುರಿತ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw