ಪಟಾಕಿ ಹಚ್ಚುವುದಿಲ್ಲವೆಂದು ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪ್ರತಿಜ್ಞೆ! - Mahanayaka
1:06 PM Wednesday 5 - February 2025

ಪಟಾಕಿ ಹಚ್ಚುವುದಿಲ್ಲವೆಂದು ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪ್ರತಿಜ್ಞೆ!

chamarajanagara
12/11/2023

ಚಾಮರಾಜನಗರ: ತಾವು ಈ ದೀಪಾವಳಿಯಲ್ಲಿ ಪಟಾಕಿ ಹಚ್ಚದೇ, ದೀಪ ಬೆಳಗಿ ಪರಿಸರ ದೀಪಾವಳಿ ಆಚರಿಸುತ್ತೇವೆ ಎಂದು ಸರ್ಕಾರಿ ಶಾಲಾ ಮಕ್ಕಳು ಪ್ರತಿಜ್ಞೆ ಮಾಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಶಾಲಾ ಮಕ್ಕಳು ಪಟಾಕಿ ಹಚ್ಚುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದು ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚದೆ ನೆಲ ಮಾಲಿನ್ಯ, ಜಲ ಮಾಲಿನ್ಯ,ಶಬ್ಧ ಮಾಲಿನ್ಯ ವಾಯು ಮಾಲಿನ್ಯ ತಡೆ ಗಟ್ಟುತ್ತೇವೆಂದು ಹಾಗೂ ನಮ್ಮ ನಮ್ಮ ಮನೆಗಳಲ್ಲಿ ಮಣ್ಣಿನ ದೀಪಗಳನ್ನು ಹಚ್ಚಿ ಮನೆ ಮನಗಳನ್ನು ಬೆಳಗುವ ಮೂಲಕ ಹಸಿರು ದೀಪಾವಳಿ, ಸ್ವಾಸ್ಥ್ಯ ದೀಪಾವಳಿ, ಹಾಗೂ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡುತ್ತೇವೆಂದು ಧೃಢ ನಿಲುವು ತಳೆದಿದ್ದಾರೆ.

ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ಮಾತನಾಡಿ, ಶಾಲೆಯಲ್ಲಿ ಸುಮಾರು ಏಳು ವರ್ಷಗಳಿಂದಲೂ ಪ್ರತಿ ವರ್ಷ ಹಬ್ಬದ ಒಂದು ವಾರ ಮುಂಚಿತವಾಗಿ ಪ್ರತಿ ನಿತ್ಯ ಪ್ರಾರ್ಥನಾ ಸಮಯದಲ್ಲಿ ಪ್ರತಿಜ್ಞೆ ಮಾಡಿಸಲಾಗುತ್ತದೆ. ಹಾಗೂ ಪಟಾಕಿ ಬಳಸುವುದರಿಂದ ಆಗಬಹುದಾದ ಅಪಾರ ಹಾನಿ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಯಾವುದೇ ಮಕ್ಕಳು ಪಟಾಕಿ ಬಳಸದೆ ಪರಿಸರ ಸಂರಕ್ಷಣೆ ಮಾಡುತ್ತಿರುವುದು ಹೆಮ್ಮೆ ಹಾಗೂ ಇತರರಿಗೆ ಮಾದರಿ ಎಂದು ತಿಳಿಸಿದ್ದಾರೆ‌.

ಇತ್ತೀಚಿನ ಸುದ್ದಿ