ಕೊಳವೆ ಬಾವಿ ದುರಂತ ತಪ್ಪಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಿದೆ ಸರ್ಕಾರ!
ಬೆಂಗಳೂರು: ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷೆಯ ಪ್ರಮಾಣ ಹೀಗಿದೆ:
ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು.
ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ₹5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶ ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: