ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಅನ್ಯಾಯ: ಪ್ರಿಯಾಂಕ್ ಖರ್ಗೆ ಆಗ್ರಹಕ್ಕೆ ಮಣಿದ ಸರ್ಕಾರ - Mahanayaka

ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಅನ್ಯಾಯ: ಪ್ರಿಯಾಂಕ್ ಖರ್ಗೆ ಆಗ್ರಹಕ್ಕೆ ಮಣಿದ ಸರ್ಕಾರ

priyank kharge
08/12/2022

ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಶೋಷಿತ ವರ್ಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಬರೆದ ಪತ್ರಕ್ಕೆ ಮಣಿದು ಸರ್ಕಾರ ಆದೇಶ ಹಿಂಪಡೆದಿದೆ.

ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ನಿಯಮಗಳ ಪ್ರಕಾರ ಹೆಚ್ಚಿನ ಅಂಕ ಪಡೆದ SC/ST ಅಭ್ಯರ್ಥಿಗಳಿಗೆ General Merit ವರ್ಗದಲ್ಲಿ ಅವಕಾಶ ಕೊಡದೇ, ಬ್ಯಾಕ್ ಲಾಗ್ ಹುದ್ದೆಗಳಲ್ಲಿ ನೇಮಕ ನಡೆಸಲು ಮುಂದಾಗಿದ್ದು ಶೋಷಿತ ವರ್ಗದ ಅಭ್ಯರ್ಥಿಗಳಿಗೆ ಅನ್ಯಾಯದ ನಡೆಯಾಗಿತ್ತು. ಈ ಹಿನ್ನಲೆಯಲ್ಲಿ ನವೆಂಬರ್’ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಸರ್ಕಾರದ ನಡೆಯಿಂದ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳ ಪರವಾಗಿ ಪತ್ರ ಬರೆದು, ಈ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿದ್ದೆ.

ಇದೀಗ ನನ್ನ ಮನವಿ ಪತ್ರಕ್ಕೆ ಸ್ಪಂದಿಸಿ, ಆಗ್ರಹಕ್ಕೆ ಮಣಿದು, ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿದೆ. ಇದರಿಂದ ಸಾಕಷ್ಟು ಹುದ್ದೆಗಳಲ್ಲಿ ಶೋಷಿತ ವರ್ಗದವರಿಗೆ ಅವಕಾಶ ಸಿಕ್ಕಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ