ಹೊಸದಾಗಿ 5,267 ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ : ಯಾರು ಅರ್ಹರು?
ಕರ್ನಾಟಕ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವಂತಹ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5 ಸಾವಿರಕ್ಕಿಂತಲೂ ಹೆಚ್ಚು ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿಯ ಮುಖಾಂತರ ಭರ್ತಿ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ.
ರಾಜ್ಯದ ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ವಿವರವು ಕೆಳಗಿನಂತಿದೆ.
* 1 ರಿಂದ 5ನೇ ತರಗತಿಯ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು – 4,424
* 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರು – 78 ಹುದ್ದೆಗಳು
* ದೈಹಿಕ ಶಿಕ್ಷಣ ಶಿಕ್ಷಕರು – 380 ಹುದ್ದೆಗಳು
* SEC AM – 121 ಹುದ್ದೆಗಳು
* SEC PET – 216 ಹುದ್ದೆಗಳು
* SEC ವಿಶೇಷ – 48 ಹುದ್ದೆಗಳು
ಈ ಹುದ್ದೆಗಳಿಗೆ ಯಾವೆಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?
ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
ಒಂದನೇ ತರಗತಿಯಿಂದ 5ನೇ ತರಗತಿ ಬೋಧನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಒಂದು ಪದವಿ ಮುಗಿಸಿ ಅದರ ಜೊತೆಗೆ ಡಿಎಡ್ ಅಧ್ಯಯನ ಮುಗಿಸಿರಬೇಕು. ನಂತರದಲ್ಲಿ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಮೊದಲನೇ ಪತ್ರಿಕೆಯಲ್ಲಿ ಪಾಸಾಗಿರುವುದು ಕಡ್ಡಾಯವಾಗಿರುತ್ತದೆ.
6 ರಿಂದ 8ನೇ ತರಗತಿ ಬೋಧನೆಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವರ ಪದವಿ ಜೊತೆಗೆ ಬಿ. ಎಡ್ ಅಧ್ಯಯನ ಮುಗಿಸಿರಬೇಕು. ಇದರ ಜೊತೆಗೆ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಎರಡನೆಯ ಪತ್ರಿಕೆಯಲ್ಲಿಯೂ ಕೂಡ ಪಾಸಾಗಿರಬೇಕು.
ನೇಮಕಾತಿ ಪ್ರಕ್ರಿಯೆ ಯಾವಾಗ ಆರಂಭವಾಗಲಿದೆ?
ಕರ್ನಾಟಕ ರಾಜ್ಯ ಸರ್ಕಾರದ 2024-25 ನೇ ಸಾಲಿನ ಬಜೆಟ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: