ಸರ್ಕಾರ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧ: ಅಮಿತ್ ಶಾ
ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿನ ತಿದ್ದುಪಡಿಯನ್ನು ಈ ಮಸೂದೆ ಒಳಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯಲ್ಲಿ 100 ದಿನಗಳನ್ನು ಪೂರೈಸಿದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗೃಹ ಸಚಿವ ಅಮಿತ್ ಶಾ , ‘ಮಸೂದೆಯು ವಕ್ಫ್ ಆಸ್ತಿಗಳ ದುರ್ಬಳಕೆಯನ್ನು ತಡೆಗಟ್ಟುತ್ತದೆ’ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಆದರೆ, ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮರು ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಶಿಫಾರಸು ಮಾಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth