ಪೆಟ್ರೋಲ್—ಡೀಸೆಲ್ ಮೇಲಿನ ಅಬಕಾರಿ ಸುಂಕ 2 ರೂ. ಹೆಚ್ಚಳ!

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ 2 ರೂ. ಹೆಚ್ಚಿಸಿದೆ. ಆದರೆ ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿದು ಬಂದಿದೆ.
ಅಂತರರಾಷ್ಟ್ರೀಯ ತೈಲ ಬೆಲೆಗಳು ಕುಸಿಯುತ್ತಿರುವುದರಿಂದ ಖಾತರಿಪಡಿಸಲಾದ ಬೆಲೆ ಕಡಿತಕ್ಕೆ ಅನುಗುಣವಾಗಿ ಹೆಚ್ಚಳವನ್ನು ಸರಿಹೊಂದಿಸಲಾಗುತ್ತದೆ ಎಂದು ಹೇಳಲಾಗಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಸಾಮಾನ್ಯವಾಗಿ ಗ್ರಾಹಕರಿಗೆ ಹೊರೆಯಾಗುತ್ತದೆ. ಆದರೆ, ಚಿಲ್ಲರೆ ಮಾರಾಟದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: