ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು | ಬಾಬಾ ರಾಮ್ ದೇವ್
02/11/2021
ತಿರುಪತಿ: ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಯೋಗಗುರು ರಾಮ್ ದೇವ್ ಒತ್ತಾಯಿಸಿದ್ದು, ಪಿಎಂ ಹಾಗೂ ಗೃಹ ಸಚಿವರು ಈ ಸಂಬಂಧ ಮಸೂದೆಯನ್ನು ಜಾರಿಗೆ ತರಲಿ ಎಂದು ಅವು ಹೇಳಿದ್ದಾರೆ.
ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದ ಗೋ ಮಹಾಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ವಿಶೇಷ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಪತಂಜಲಿ ಪೀಠವು ಈಗಾಗಲೇ ಗೋ ಸಂರಕ್ಷಣಾ ಅಭಿಯಾನವನ್ನು ಆರಂಭಿಸಿದೆ. ಗೋವು ಮಹಾ ಸಮ್ಮೇಳನದ ನಿರ್ಣಯಗಳು ಎಲ್ಲ ಗೋ ಪ್ರೇಮಿಗಳಲ್ಲಿ ಪ್ರತಿಧ್ವನಿಸುತ್ತಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka