ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗಳಲ್ಲಿ ಚಿನ್ನಾಭರಣ ಕಳವು: ಅಂತರ್ ರಾಜ್ಯ ಕಳ್ಳರ ಬಂಧನ - Mahanayaka

ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗಳಲ್ಲಿ ಚಿನ್ನಾಭರಣ ಕಳವು: ಅಂತರ್ ರಾಜ್ಯ ಕಳ್ಳರ ಬಂಧನ

shirva
16/11/2022

ಶಿರ್ವ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.


Provided by

ಬಂಧಿತರನ್ನು ತಮಿಳುನಾಡು ರಾಜ್ಯದ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮುಹಮ್ಮದ್ ಅಲಿ(32), ಅಶುರ್ ಅಲಿ(32) ಹಾಗೂ ಗಣೇಶ್ ಕುಮಾರ್ (40) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಕಳವುಗೈದ 2.66ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಇವರು ಜೂ.6ರಂದು ಮಧ್ಯಾಹ್ನ ಶಿರ್ವ ಪೇಟೆಯ ಕೃಪಾ ಜ್ಯುವೆಲ್ಲರ್ಸ್ ಗೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೇಸ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಆರೋಪಿಗಳ ವಿರುದ್ಧ ಮೂಡಬಿದ್ರಿಯ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು.


Provided by

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಉಡುಪಿ ಎಸ್ಪಿ ಅಕ್ಷಯ್ ಹಾಕೇ, ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ಧಲಿಂಗಪ್ಪ ಹಾಗೂ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್ ಮಾರ್ಗದರ್ಶನ ದಲ್ಲಿ ಕಾಪು ವೃತ್ತ ನಿರೀಕ್ಷಕ ಪೂವಯ್ಯ ಕೆ.ಸಿ. ನೇತೃತ್ವದಲ್ಲಿ ಶಿರ್ವ ಎಸ್ಸೈ ರಾಘವೇಂದ್ರ ಸಿ., ಎಎಸ್ಸೈ ವಿವೇಕಾನಂದ ಬಿ., ಸಿಬ್ಬಂದಿಗಳಾದ ಕಿಶೋರ್ ಕುಮಾರ್, ರಘು, ಅಖಿಲ್, ಶಿವಾನಂದ ಪೂಜಾರಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ