ಗ್ರಾಮ ಪಂಚಾಯತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 25 ರಂದು ಮತದಾನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಫೆ. 23 ರ ಸಂಜೆ 5 ರಿಂದ ಫೆ. 25 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.
ಮೇಲ್ಕಂಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw