Gram Panchayat Recruitment: ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ: PUC ಪಾಸಾಗಿದ್ದರೆ ಅರ್ಜಿ ಸಲ್ಲಿಸಬಹುದು
ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಇದೀಗ ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಾಯಿತು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ.
ದಾವಣಗೆರೆ ಜಿಲ್ಲಾ ಪಂಚಾಯಿತಿಯ, ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಅರ್ಹತೆಗಳನ್ನು ಈಗಲೇ ತಿಳಿದುಕೊಳ್ಳಿ.
ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳ ವಿವರ:
ದಾವಣಗೆರೆ ಜಿಲ್ಲಾ ಪಂಚಾಯಿತಿ ಅಡಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 16 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಿ ಆಯ್ಕೆಯಾದವರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರರಾಗಿ ಕರ್ತವ್ಯ ನಿರ್ವಹಿಸಬೇಕು.
ಅರ್ಜಿ ಸಲ್ಲಿಸಲು ಅರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿದ್ದು ಅದರ ಜೊತೆಗೆ ಸರ್ಟಿಫಿಕೇಶನ ಇನ್ ಲೈಬ್ರರಿ ಕೋರ್ಸ್ ಪ್ರಮಾಣ ಪತ್ರ ಹೊಂದಿರಬೇಕು.
ವೇತನ – ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹15,196 ರೂ. ತಿಂಗಳ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮಾಹಿತಿ: ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹತೆಯನ್ನು ಹೊಂದಿದ್ದರೆ ತಡ ಮಾಡದೆ ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಒತ್ತಿದರೆ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುತ್ತಿರಿ ಅಲ್ಲಿ ನೀವು ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬಹುದು.
ದಿನಾಂಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 29, 2024 ರಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2024
ಅರ್ಜಿ ಸಲ್ಲಿಸುವ ಜಾಲತಾಣ : https://davanagere.nic.in/en/notice/recruitment/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: