ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ksrtc
22/10/2023

ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ  ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ.  ಈ ಸಂಬಂಧ 4  ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ  ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು.

ಈ ಬಗ್ಗೆ 13,000 ಚಾಲನಾ  ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ  ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು.

ಅದರಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ.  ಸಂಸ್ಥೆವಾರು ನೇಮಕಾತಿ ವಿವರ ಈ‌ ಕೆಳಕಂಡಂತಿದೆ.

KSRTC: ಡ್ರೈವರ್ ಕಮ್ ಕಂಡಕ್ಟರ್ : 2000

ತಾಂತ್ರಿಕ ಸಿಬ್ಬಂದಿ : 300

NWKRTC :  ಡ್ರೈವರ್ ಕಮ್ ಕಂಡಕ್ಟರ್ 2000

BMTC : ಕಂಡಕ್ಟರ್ 2500

KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ‌ ಪ್ರಕ್ರಿಯೆ  ‌ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುವುದು. ಹಾಗೂ KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.

ಒಟ್ಟಾರೆ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ.

ಇತ್ತೀಚಿನ ಸುದ್ದಿ

Exit mobile version