ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ಮಹಿಳೆಯ ಮೇಲೆ ಕಾಮುಕರ ಅಟ್ಟಹಾಸ; ಮಹಿಳೆಯ ಭೀಕರ ಹತ್ಯೆ
25/02/2021
ಮೈಸೂರು: ಗೃಹಿಣಿಯೋರ್ವರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದ್ದು, ಮಹಿಳೆಯನ್ನು ಅತ್ಯಾಚಾರ ನಡೆಸಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.
ನಂಜನಗೂಡು ತಾಲೂಕಿನ ಅಡಕನಹುಂಡಿ ಬಳಿಯಲ್ಲಿ ಈ ಘಟನಡ ನಡೆದಿದ್ದು, ಇಲ್ಲಿನ ಹದಿನಾರು ಮೋಳೆ ಗ್ರಾಮದ 26 ವರ್ಷ ವಯಸ್ಸಿನ ಗೃಹಿಣಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದ್ದು, ಗೃಹಿಣಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತ ಮಹಿಳೆ, ಕೆಲಸ ಮುಗಿಸಿ ವಾಪಸ್ ಆಗುತ್ತಿರುವ ಸಂದರ್ಭದಲ್ಲಿ ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿ 5 ಬಿಯರ್ ಬಾಟಲಿಗಳು ಪತ್ತೆಯಾಗಿವೆ. ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.