ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ.
ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw