ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್: ಕಾಂಗ್ರೆಸ್ ಸೇರುವ ಸಾಧ್ಯತೆ
ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿ ಸ್ಪೀಕರ್ ಕಾಗೇರಿ ಅವರಿಗಿಂದು ರಾಜೀನಾಮೆ ಸಲ್ಲಿಸಿದರು.
ಕೆಲದಿನಗಳಿಂದ ಜೆಡಿಎಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡಿದ್ದ ಅವರು ಪಕ್ಷ ತ್ಯಜಿಸುತ್ತಾರೆ ಎಂಬ ವದಂತಿಗಳು ಹರಡಿದ್ದವು. ಅದಕ್ಕೆ ಪುಷ್ಠಿ ಕೊಡುವಂತೆ ಇಂದು ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ‘ಭಾರತ್ ಜೋಡೋ’ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದ ಅವರು ಪಾದಯಾತ್ರೆಯನ್ನು ಸ್ವಾಗತಿಸಿದ್ದರು. ಆಗ “ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ. ಭಾರತ್ ಜೋಡೋ ಯಾತ್ರೆ ಒಳ್ಳೆ ಉದ್ದೇಶ ಇಟ್ಟುಕೊಂಡು ನಡೆಯುತ್ತಿದೆ” ಎಂದಿದ್ದರು.
ಇದೇ ರೀತಿಯಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ. ಕಡೂರಿನ ವೈ.ಎಸ್.ವಿ ದತ್ತಾರವರು ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.
2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಶಾಸಕರು ಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿರುತ್ತಿದ್ದಾರೆ. ಅವರಿಗೆಲ್ಲ ಟಿಕೆಟ್ ನಿಡಲು ಕಾಂಗ್ರೆಸ್ ಚಿಂತಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw