ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಅರೆಸ್ಟ್!
ಅಹ್ಮದಾಬಾದ್: ವಿವಾದಿತ ಟ್ವೀಟ್ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ನಾಯಕ ವಡ್ಗಾಮ್ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ(MLA Jignesh Mevani)ಯನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಪಲಂಪುರ್ ಸರ್ಕ್ಯೂಟ್ ಹೌಸ್ ನಲ್ಲಿ ಬಂಧಿಸಿದ್ದಾರೆ.
ಜಿಗ್ನೇಶ್ ಮೇವಾನಿ ಕೆಲವು ದಿನಗಳ ಹಿಂದೆ ಟ್ವೀಟ್(Tweet) ವೊಂದನ್ನು ಮಾಡಿದ್ದು, ಈ ಟ್ವೀಟ್ ಎರಡು ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮಾಡಿರುವ ಸಂಚು ಹಾಗೂ ಸಮುದಾಯವನ್ನು ಅವಮಾನಿಸಿ ಶಾಂತಿಯ ವಾತಾವರಣವನ್ನು ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿರುವ ಅಸ್ಸಾಂ ಪೊಲೀಸರು(Assam Police ), ಜಿಗ್ನೇಶ್ ಮೇವಾನಿ ವಿರುದ್ಧ ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಂಧನದ ವೇಳೆ ಪೊಲೀಸರ ಬಳಿ ಎಫ್ ಐಆರ್ ಪ್ರತಿ ಕೂಡ ಇರಲಿಲ್ಲ. ಯಾರದ್ದೋ ಬಲವಂತಕ್ಕೆ ಪೊಲೀಸರು ಮೇವಾನಿಯನ್ನು ಬಂಧಿಸಿದ್ದಾರೆ ಎಂದು ಜಿಗ್ನೇಶ್ ಮೇವಾನಿ ಬೆಂಬಲಿಗರು ಹೇಳಿಕೆ ನೀಡಿದ್ದಾರೆ.
ಘಟನೆಯನ್ನು ವಿರೋಧಿಸಿ, ಕಾಂಗ್ರೆಸ್ ನಾಯಕರು ಹಾಗೂ ಬೆಂಬಲಿಗರು ಇಂದು ರಾಷ್ಟ್ರ ರಾಜಧಾನಿಯಲ್ಲಿ ‘ಸಂವಿಧಾನ ಉಳಿಸಿ, ದೇಶ ಉಳಿಸಿ’ ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಟವಾಡುತ್ತಿದ್ದ ಬಾಲಕನಿಗೆ ಟಿಪ್ಪರ್ ಡಿಕ್ಕಿ: ಬಾಲಕನ ದಾರುಣ ಸಾವು
ಪ್ರಾಧ್ಯಾಪಕಿಯ ಬಗ್ಗೆ ಮಾನಹಾನಿಕರ ಪೋಸ್ಟರ್ ಅಂಟಿಸಿ ಕಿರುಕುಳ: ಇಬ್ಬರು ಪ್ರಾಧ್ಯಾಪಕರ ಬಂಧನ
ಸರ್ಕಾರದ ಮೇಲೆ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು | ನಿರಂಜನಾನಂದಪುರಿ ಸ್ವಾಮೀಜಿ