ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ - Mahanayaka

ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ

noida
14/10/2021

ನೋಯ್ಡಾ:  ಗನ್ ತೋರಿಸಿ ಬೆದರಿಸಿ ದಲಿತ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಜೆವಾರ್ ನಲ್ಲಿ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಬುಧವಾರ ಆರೋಪಿಗಳನ್ನು ಬಂಧಿಸಲಾಗಿದೆ.


Provided by

ಆರೋಪಿಗಳು ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಗನ್ ತೋರಿಸಿ ಬೆದರಿಸಿದ್ದು, ಬಳಿಕ ಅತ್ಯಾಚಾರಕ್ಕೆ ಎಸಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹೇಂದ್ರ ಎಂಬಾತನ ಗುರುತನ್ನು ಸಂತ್ರಸ್ತೆ ಪತ್ತೆ ಹಚ್ಚಿದ್ದು, ಈ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಜೆವಾರ್‌ ನಲ್ಲಿರುವ ಆತನ ಹಳ್ಳಿಯ ಬಳಿ ಪೊಲೀಸರು, ವಿಶೇಷ ಕಾರ್ಯಾಚರಣೆ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಮಹೇಂದ್ರನ ವಿರುದ್ಧ ಹಿಂದೆ ಹಲವು ಪ್ರಕರಣ ದಾಖಲಾಗಿವೆ. ಈ ದೂರಿನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿ ಆತ. ಸಂತ್ರಸ್ತೆಗೆ ತೋರಿಸಿದ ಚಿತ್ರದ ಮೂಲಕ ಆತನನ್ನು ಗುರುತಿಸಿದ ನಂತರ ಆರೋಪಿಯನ್ನು ಬಂಧಿಸಲಾಯಿತು.


Provided by

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 376 ಡಿ(ಗ್ಯಾಂಗ್‌ ರೇಪ್), 352 ಮತ್ತು 506 ಅಡಿಯಲ್ಲಿ ಪೊಲೀಸರು ಎಫ್‌ ಐಆರ್ ದಾಖಲಿಸಿದ್ದಾರೆ. ಎಸ್ ಸಿ, ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ, 1989 ರ ವಿಭಾಗಗಳಲ್ಲಿ  ಎಫ್‌ ಐಆರ್‌ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಅದೇ ವಿಡಿಯೋದಲ್ಲಿ ಬಿ.ವೈ.ವಿಜಯೇಂದ್ರ ಬಗ್ಗೆಯೂ ಮಾತನಾಡಿದ್ರಂತೆ ಸಲೀಂ | ವಿಡಿಯೋ ಕಟ್ ಮಾಡಿ ತೋರಿಸಲಾಗಿದೆ ಎಂಬ ಆರೋಪ

ಹಬ್ಬದ ದಿನವೇ ಘೋರ ಕೃತ್ಯ: ಸಾಂಬರ್ ಚೆನ್ನಾಗಿಲ್ಲ ಎಂದು ತಾಯಿ, ತಂಗಿಯನ್ನು ಗುಂಡು ಹಾರಿಸಿಕೊಂಡ ಪಾಪಿ!

ಪರಿವರ್ತನೆ ಬಯಸುವ ಚಲನಶೀಲ ಮನುಷ್ಯರಿಗೆಲ್ಲರಿಗೂ 65ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು

ಕೋಟಿಗೊಬ್ಬ-3 ಬಿಡುಗಡೆಗೆ ಯಾರಿಂದ ತೊಂದರೆ ಆಯ್ತು ಅಂತ ಗೊತ್ತಿದೆ | ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್

ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ

ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ಬಿಜೆಪಿಯ ಭ್ರಷ್ಟಾಚಾರವನ್ನು ಶಾಸಕರೊಬ್ಬರು ಮಂಚದ ಮೇಲೆಯೂ ಕನವರಿಸಿದ್ದರು | ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಇತ್ತೀಚಿನ ಸುದ್ದಿ