ರೈಲು ದುರಂತದಲ್ಲಿ ಸಿಲುಕಿದ ಗುಂಡ್ಲುಪೇಟೆ ಯುವಕರು: ತವರಿಗೆ ಕರೆತರಲು ಶಾಸಕರ ನೆರವು

ಚಾಮರಾಜನಗರ: ಒಡಿಶಾ ರೈಲು ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಸಿಲುಕಿಕೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಮಾಹಿತಿ ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಶ್ ಹಾಗೂ ಪವನ್ ಎಂಬ ಯುವಕರು ಅಪಘಾತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು ಸದ್ಯ ಯಾವುದೇ ಹಾನಿಯಾಗಿಲ್ಲ ಆದರೆ ತವರಿಗೆ ಮರಳಲು ರೈಲು ಇಲ್ಲದೇ ಪ್ರಯಾಸ ಪಡುತ್ತಿದ್ದಾರೆ.
ಕರ್ನಾಟಕದ ಜನರನ್ನು ಕರೆತರಲು ಹೋಗಿರುವ ಸಚಿವ ಸಂತೋಷ್ ಲಾಡ್ ಅವರೊಟ್ಟಿಗೆ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ ಯುವಕರಿಗೆ ನೆರವು ಕೊಡಿಸಿದ್ದು ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ರವಾನಿಸಿ ಪರ್ಯಾಯ ಮಾರ್ಗದಲ್ಲಿ ರಾಜ್ಯಕ್ಕೆ ಹಿಂತಿರುಗುವಂತೆ ಸಲಹೆ ಕೊಟ್ಟಿದ್ದಾರೆ.
ಸೇನೆಯ ಪರೀಕ್ಷೆ ಬರೆಯಲು ತೆರಳಿದ್ದರು, ಅಪಘಾತವಾದ ರೈಲಿನಲ್ಲೇ ಇದ್ದರು, ಶಾಸಕ ಗಣೇಶ್ ಪ್ರಸಾದ್ ತುರ್ತಾಗಿ ಸ್ಪಂದಿಸಿ ಮಕ್ಕಳಿಗೆ ನೆರವಾಗಿದ್ದಾರೆ, ಅಪಘಾತ ನಡೆದ ಸ್ಥಳದಿಂದ 100 ಕಿಮೀ ದೂರದಲ್ಲಿ ಈಗ ಬಂದಿದ್ದು ಆದಷ್ಟು ಬೇಗ ಮನೆಗೆ ತಲುಪುವ ಭರವಸೆ ಇದೆ ಎಂದು ಮಹೇಶ್ ಅವರ ತಂದೆ ಮಹಾದೇವನಾಯ್ಕ ಮಾಹಿತಿ ನೀಡಿದ್ದಾರೆ.
ಸೇನೆಯ ಪರೀಕ್ಷೆ ಬರೆಯಲು ಬಂದಿದ್ದೆವು, ರೈಲುಗಳು ರದ್ದಾಗಿದ್ದು ಬೇರೆ ಮಾರ್ಗದಲ್ಲಿ ರಾಜ್ಯ ತಲುಪಬೇಕಿದೆ, ಶಾಸಕ, ಸಚಿವರು ಅಭಯ ಕೊಟ್ಟಿದ್ದಾರೆ, ದುರಂತದ ಕ್ಷಣಗಳು ಇನ್ನೂ ಕಣ್ಣಮುಂದೆಯೇ ಇದೆ ಎಂದು ಯುವಕ ಮಹೇಶ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw