ಗುಂಡು ಹಾರಿಸಿ ಮಹಿಳಾ ಪೊಲೀಸ್ ಆತ್ಮಹತ್ಯೆಗೆ ಯತ್ನ

ಮಂಗಳೂರು: ನಗರದ ಎನ್ ಎಂಪಿಟಿ ಮುಖ್ಯಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ರಾಜಸ್ಥಾನದ ಭರತ್ ಪುರ ಜಿಲ್ಲೆಯ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದ ಸಿಐಎಸ್ ಎಫ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗಂಭೀರವಾಗಿ ಗಾಯಗೊಂಡಿರುವ ಜ್ಯೋತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆಯಂತೆ ಕೌಟುಂಬಿಕ ಕಾರಣಗಳಿಂದಾಗಿ ಜ್ಯೋತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಬರೆದಿದ್ದಾರೆ ಎನ್ನಲಾದ ನೋಟ್ ಪೊಲೀಸರಿಗೆ ಲಭ್ಯವಾಗಿದ್ದು, “ಜೀವನದಿಂದ ಮನಸು ತುಂಬಿದೆ. ನನ್ನ ಈ ಸ್ಥಿತಿಗೆ ನಾನೇ ಕಾರಣ” ಎಂದು ಹಿಂದಿಯಲ್ಲಿ ಬರೆಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka