ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬೃಹತ್ ಪಾದಯಾತ್ರೆ: ಕೆ.ವಸಂತ ಬಂಗೇರ
ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಆ.22. ರಂದು ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿರುವುದಾಗಿ ಮಾಜಿ ಶಾಸಕ ಕೆ.ವಸಂತ ಬಂಗೇರ ತಿಳಿಸಿದ್ದಾರೆ.
ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ಪಕ್ಷತೀತವಾಗಿ ನಡೆಯುವ ಈ ಪಾದಯಾತ್ರೆಯಲ್ಲಿ ದೇಶಪ್ರೇಮಿ ನಾಗರಿಕರು ಭಾಗವಹಿಸಿ ಕಾರ್ಯಕ್ತಮವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದರು ಗುರುವಾಯನಕೆರೆ, ಬೆಳ್ತಂಗಡಿ ಸಂತೆಕಟ್ಟೆ, ಮತ್ತು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ 3 ಕಡೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಆ.15 ರಂದು ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಅತ್ಯಂತ ಯಶಸ್ವಿಯಾಗಿ ನಡೆದಿದೆ ಕಾಂಗ್ರೆಸ್ ಪಕ್ಷದ ಹಾಗೂ ಗಾಂಧೀಜಿಯವರ ನೇತೃತ್ವದಲ್ಲಿ ಹಲವಾರು ನಾಯಕರ ತ್ಯಾಗ ಬಲಿದಾನದ ಮೂಲಕ ಭಾರತಕ್ಕೆ 1947 ರಲ್ಲಿ ಸ್ವಾತಂತ್ರ್ಯ ದೊರಕಿದ್ದು, ಅದರ ಅಮೃತ ಮಹೋತ್ಸವದ ಈ ಸಂಧರ್ಭದಲ್ಲಿ ಅಮೃತ ಮಹೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ನಡೆಸಲು ಪಕ್ಷವು ನಿರ್ದರಿಸಿದ್ದು ಅದರಂತೆ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬ್ಲಾಕ್ ಕಾಗ್ರೇಸ್ ನಗರ ಸಮಿತಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್ ಮಾತನಾಡಿ ಈ ಪಾದಯಾತ್ರೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸೂಚನೆಯಂತೆ ನಡೆಯುತ್ತಿದ್ದು ಸ್ವಾತಂತ್ರೋತ್ಸವದ ಮೊದಲೇ ನಡೆಸಬೇಕಿತ್ತು ಜಿಲ್ಲೆಯಲ್ಲಿ ನಡೆದ ಹಲವು ಅಹಿತಕರ ಘಟನೆಗಳಿಂದ ಈಗ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪಕ್ಷದ ವಕ್ತಾರರಾದ ಕೆ. ಕೇಶವ ಗೌಡ, ಮನೋಹರ ಇಳಂತಿಲ, ಪ್ರಧಾನ ಕಾರ್ಯದರ್ಶಿ ನೇಮಿರಾಜ್ ಕಿಲ್ಲೂರು,ಜಿಲ್ಲಾ ಯುವ ಕಾಂಗ್ರೇಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka