ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ: ಮುಂದಿರೋ ಸವಾಲೇನು?

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದಾರೆ. ಆಯ್ಕೆ ಸಮಿತಿಯ ಸ್ವರೂಪವನ್ನು ಪ್ರಶ್ನಿಸಿ ಇದೇ ಸಮಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸುಪ್ರಿಮ್ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.
ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಅವರು ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ರ ಸ್ಥಾನವನ್ನು ತುಂಬಲಿದ್ದಾರೆ.
26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿರುತ್ತಾರೆ. ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸುವ ತೀರ್ಮಾನವನ್ನು ಅನುಷ್ಠಾನಕ್ಕೆ ತರುವಲ್ಲಿ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು.
ಸಿ.ಇ.ಸಿ ನೇಮಕಕ್ಕೆ ಸಂಬಂಧಿಸಿದ ಆಯ್ಕೆ ಸಮಿತಿಯ ಸ್ವರೂಪವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಪೂರ್ಣಗೊಳ್ಳುವವರೆಗೆ ಹೊಸ ಸಿ.ಇ.ಸಿ ನೇಮಕವನ್ನು ಮುಂದೂಡಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದ ಕೆಲವೇ ಗಂಟೆಗಳ ನಂತರ ಈ ನೇಮಕ ಆಗಿದೆ.
ಕಾಂಗ್ರೆಸ್ ಪಕ್ಷದ ಈ ಬೇಡಿಕೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಯ್ಕೆ ಸಮಿತಿಯ ಸಭೆಯಲ್ಲಿ ಮಂಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮಿತಿಯ ಸಭೆ ನಡೆಯಿತು. ಪ್ರಧಾನಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಹುಲ್ ಈ ಸಮಿತಿಯ ಸದಸ್ಯರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj