ಸಿ.ಟಿ.ರವಿ ಕೇಸ್: ಪೊಲೀಸರ ದುರ್ಬಳಕೆ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಹಾಸನ: ಸಿ.ಟಿ.ರವಿ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯನ್ನ ದುರ್ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಹರದನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದ ನಂತರ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ರೀತಿ ಹೋಗಬಹುದು ಅನ್ನುವುದಕ್ಕೆ ವೇದಿಕೆ ಸಿದ್ದ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕದ ಪೊಲೀಸ್ ಇಲಾಖೆ ದೇಶದಲ್ಲೇ ವಿಶೇಷವಾದ ಗೌರವಯುತ ಸ್ಥಾನ ಇದೆ. ಕರ್ನಾಟಕ ಪೊಲೀಸ್ ದೇಶದಲ್ಲೇ ಉತ್ತಮ ಕೆಲಸ ಮಾಡುವ ಇಲಾಖೆ ಗೌರವ ಇತ್ತು. . ದುರಾದೃಷ್ಟ ಎಂದರೆ ಆ ಗೌರವವನ್ನು ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಸಂಪೂರ್ಣವಾಗಿ ಪೊಲೀಸ್ ಇಲಾಖೆ ದೂಷಿಸಲ್ಲ. ಇವತ್ತು ಸರ್ಕಾರದಲ್ಲಿರುವ ಮಂತ್ರಿಗಳು ಕೆಲವು ಆಯ್ದ ಪೊಲೀಸ್ ಅಧಿಕಾರಿಗಳಿಗೆ ಡೈರೆಕ್ಷನ್ ಕೊಡುವ ಮೂಲಕ ಕಾನೂನು ಬಾಹಿರವಾದಂತಹ ತೀರ್ಮಾನಗಳಾಗುತ್ತಿವೆ ಎಂದು ಅವರು ಆರೋಪಿಸಿದರು.
ಬೇಕಾದಂತೆ ಕೇಸ್ಗಳನ್ನು ಬುಕ್ ಮಾಡುತ್ತಿದ್ದಾರೆ. ಯಾವ ರೀತಿ ಅವರ ವಿರೋಧಿಗಳನ್ನು ಸದೆಬಡೆಯಬೇಕೆಂದು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ. ಕಾನೂನಿನ ಉಲ್ಲಂಘನೆ ಸರ್ಕಾರದಿಂದಲೇ ಆಗುತ್ತಿದೆ ಎಂದು ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7