ಎಚ್‌ಐವಿ ಹೊಂದಿದ್ದ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ - Mahanayaka
4:08 AM Wednesday 11 - December 2024

ಎಚ್‌ಐವಿ ಹೊಂದಿದ್ದ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ

rape
11/02/2022

ಮುಂಬೈ: ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ಯಾರೂ ಇಲ್ಲದ ವೇಳೆ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಎಚ್‍ಐವಿ ರೋಗ ಹೊಂದಿದ್ದಾನೆ. ಇದೀಗ ಆತನಿಂದ ಬಾಲಕಿಗೂ ಸೋಂಕು ತಗುಲಿದೆಯೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅಲ್ಲದೇ ಬಾಲಕಿ ತಾಯಿ ಕೂಡ ಎಚ್‍ ಐವಿ ಸೋಂಕು ಹೊಂದಿದ್ದಾರೆ ಎಂದು ತಿಳಿಸಲಾಗಿದೆ.
ಇನ್ನೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಆರೋಪಿ ಬಾಲಕಿಗೆ ಬೆದರಿಕೆಯೊಡ್ಡಿದ್ದು, ಬಾಲಕಿಯು ತನ್ನ ನೆರೆಹೊರೆಯ ಮಹಿಳೆಯ ಬಳಿ ತನಗಾದ ಅನ್ಯಾಯವನ್ನು ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಹಿಳೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ, 2012 ರ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಆಜಾದ್ ಮೈದಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಗೂಗಲ್ ಮ್ಯಾಪ್ ನೋಡಿ ಕಾರು ಚಾಲನೆ: ಕಾಲುವೆಗೆ ಬಿದ್ದು, 3 ಮಂದಿ ಸಾವು

ಎನ್‌ ಐಟಿಕೆ ಟೋಲ್‌ಗೇಟ್‌ ವಿರುದ್ಧ ಕೆಸರು ನೀರಲ್ಲಿ ಕುಳಿತು ವಿನೂತನ ಪ್ರತಿಭಟನೆ

ಜಿ.ಪಂ., ತಾ.ಪಂ. ಚುನಾವಣೆ: ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ: ಸಚಿವ ಈಶ್ವರಪ್ಪ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಬೇಡಿ: ಆರೆಸ್ಸೆಸ್ ಸೂಚನೆ

ಅಪಾರ್ಟ್‍ಮೆಂಟ್ ಛಾವಣಿ ಕುಸಿದು ಇಬ್ಬರು ಸಾವು, 6 ಮಂದಿ ಗಾಯ

 

ಇತ್ತೀಚಿನ ಸುದ್ದಿ