ಹಾಡಹಗಲೇ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ - Mahanayaka
6:25 AM Wednesday 5 - February 2025

ಹಾಡಹಗಲೇ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

rape
21/01/2022

ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್‌ ಪೊಲೀಸ್‌  ಠಾಣೆ ವ್ಯಾಪ್ತಿಯ ಬಾಗ್‌ಪುರ ಚೆಕ್‌ ಪೋಸ್ಟ್‌ನಿಂದ ಕೇವಲ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಿವಾಹಿತ ಮಹಿಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೂವರು ಯುವಕರು ಬೈಕ್‌ ನಲ್ಲಿ ಹಿಂಬಾಲಿಸಿಕೊಂಡು ಬಂದು ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಿಎಸ್ ​ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ: ರಚನಾ ಹನುಮಂತ ರಾಜ್ಯಕ್ಕೆ ಪ್ರಥಮ

ಕ್ರೈಸ್ತ ಧಾರ್ಮಿಕ ಸಮಾರಂಭದಲ್ಲಿ ಕಾಲ್ತುಳಿತ; 29 ಮಂದಿ ಸಾವು

ಚಲಿಸುತ್ತಿದ್ದ ಬಿಎಂಟಿಸಿ ಬಸ್ ​ನಲ್ಲಿ ಆಕಸ್ಮಿಕ ಬೆಂಕಿ

ಗರ್ಭಿಣಿ ಅರಣ್ಯ ರಕ್ಷಕಿ ಮೇಲೆ ದಂಪತಿಯಿಂದ ಥಳಿತ

ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಿಓ ಬಂಧನ

 

ಇತ್ತೀಚಿನ ಸುದ್ದಿ