ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಭರ್ಜರಿ ಜಾಬ್ ಆಫರ್: ₹60,000 ವರೆಗೆ ವೇತನ - Mahanayaka
9:28 AM Thursday 26 - December 2024

ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಭರ್ಜರಿ ಜಾಬ್ ಆಫರ್: ₹60,000 ವರೆಗೆ ವೇತನ

hal
20/11/2024

HAL Jobs 2024 : ಭಾರತದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಮತ್ತು ಬಿಡಿ ಭಾಗಗಳನ್ನು ತಯಾರಿಕೆಯ  ಮುಖ್ಯ ಸಂಸ್ಥೆಯಾಗಿರುವಂತಹ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಮತ್ತು ಅವಶ್ಯಕತೆ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಖಾಲಿ ಇರುವಂತಹ ಹುದ್ದೆಗಳ ವಿವರ:

ಈ ಸಂಸ್ಥೆಯಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 2 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ನಂತರದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಒಂದು ವರ್ಷವನ್ನು ವಿಸ್ತರಿಸಲಾಗುವುದು.

ಹುದ್ದೆಗಳು:

*  ಸಿಎಂಎಂ ಇಂಜಿನಿಯರ್ — 04 ಹುದ್ದೆಗಳು

*  ಮಿಡಲ್ ಸ್ಪೆಷಲಿಸ್ಟ್– 12 ಹುದ್ದೆಗಳು

*  ಜೂನಿಯರ್ ಸ್ಪೆಷಲಿಸ್ಟ್ — 08 ಹುದ್ದೆಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಹಾಗೂ ವಯೋಮಿತಿ:

ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ವಯೋಮಿತಿ — 18 ರಿಂದ 45 ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ:

*  ಸಾಮಾನ್ಯ ವರ್ಗದ, ಇತರೆ ಹಿಂದುಳಿದ ವರ್ಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500ರೂ. ಅರ್ಜಿ ಶುಲ್ಕ ಪಾವತಿಸಬೇಕು.

*  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಿಲ್ಲ.

ಅರ್ಜಿ ಸಲ್ಲಿಸೋದು ಹೇಗೆ?

ಅರ್ಹತೆ ಹೊಂದಿದ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

HAL ಅಧಿಕೃತ ಜಾಲತಾಣ:  https://hal-india.co.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ