ಹಲಗೆ ಬಾರಿಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಯುವಕರು - Mahanayaka

ಹಲಗೆ ಬಾರಿಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಯುವಕರು

crime
30/01/2022

ಜೈಪುರ: 25 ವರ್ಷದ ದಲಿತ ಯುವಕನಿಗೆ ಮೂತ್ರ ಕುಡಿಸಿದ  ಅಮಾನವಿಯ ಘಟನೆ  ರಾಜಸ್ತಾನದ ಚೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು  ಬಂಧಿಸಿದ್ದಾರೆ.

ಜನವರಿ 27ರಂದು ಎಸ್ ಯು ವಿಯಲ್ಲಿ ರುಕ್ಸಾರ್ ಗ್ರಾಮದ ರಾಕೇಶ ಮೇಘವಾಲ್ ಎಂಬ ಸಂತ್ರಸ್ತ ಯುವಕನ ಮನೆಗೆ ಬಂದ 8 ಜನರ ಗುಂಪು ಈ ಅಮಾನವೀಯ ಕೃತ್ಯ  ಎಸಗಿರುವ ಬಗ್ಗೆ ಪೋಲಿಸರು ತಿಳಿಸಿದ್ದಾರೆ.

ಗ್ರಾಮದ ಮೇಲ್ವರ್ಗದವರ ಮುಂದೆ ಹಲಗೆ ಬಾರಿಸಿದ್ದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮೂತ್ರಕುಡಿಸಿದ್ದಾರೆ ಎಂದು ಸಂತ್ರಸ್ತ ಯುವಕ ದೂರು ನೀಡಿದ್ದಾರೆ.

ಕೃತ್ಯ ನಡೆಸಿದ ಇಬ್ಬರನ್ನು ಪೋಲಿಸರು ಬಂಧಿಸಿದ್ದು, ಬಾಕಿ ಉಳಿದ ಆರು ಜನ ಆರೋಪಿಗಳಿಗೆ ಪೋಲಿಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳ ಮೇಲೆ  ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ಹಿಮಾಂಶು ಶರ್ಮ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಾಯಿ ಪೊಲೀಸರಿಗೆ ದೂರು ಕೊಡುತ್ತಾಳೆ ಎಂದು ಹೆದರಿ ವಿಷ ಕುಡಿದ ಮಗ!

ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಮುಖಂಡನಿಂದ ಅತ್ಯಾಚಾರ

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯ

ಆತಂಕಕಾರಿ ಸುದ್ದಿ: ಆಹಾರಕ್ಕಾಗಿ ಕಿಡ್ನಿಯನ್ನು ಮಾರಾಟ ಮಾಡುತ್ತಿರುವ ಅಫ್ಘಾನ್ನರು

ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

 

ಇತ್ತೀಚಿನ ಸುದ್ದಿ