ಹಲಸಿನ ಮರದಿಂದ ಬಿದ್ದು ವ್ಯಕ್ತಿಯ ದಾರುಣ ಸಾವು
ವಿಟ್ಲ: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಡ್ಕದಲ್ಲಿ ಶುಕ್ರವಾರ ನಡೆದಿದೆ.
ಕೇಶವ ನಾಯ್ಕ (56) ಮೃತಪಟ್ಟ ವ್ಯಕ್ತಿ. ಇವರು ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕೇಶವ ಹಲಸಿನ ಮರವನ್ನೇರಿ ಕಾಳುಮೆಣಸು ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದರೆನ್ನಲಾಗಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw