ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
19/02/2022
ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ.
ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಮೃತ ಬೈಕ್ ಸವಾರ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು