ಹಾಲು ಬೇಕೆಂದು ಹಠ ಮಾಡುತ್ತಿದ್ದ ಮಗುವನ್ನು ನೆಲಕ್ಕೆ ಬಡಿದು ಹತ್ಯೆ ಮಾಡಿದ ತಾಯಿ! - Mahanayaka
9:17 AM Tuesday 24 - December 2024

ಹಾಲು ಬೇಕೆಂದು ಹಠ ಮಾಡುತ್ತಿದ್ದ ಮಗುವನ್ನು ನೆಲಕ್ಕೆ ಬಡಿದು ಹತ್ಯೆ ಮಾಡಿದ ತಾಯಿ!

mother
23/09/2021

ಕೊರ್ಬಾ: ಮಗು ಹಾಲು ಬೇಕೆಂದು ಹಠ ಮಾಡಿತು ಎಂದು ಕೋಪಗೊಂಡ ತಾಯಿಯೊಬ್ಬಳು ಮಗುವನ್ನು ಹಿಡಿದು ನೆಲಕ್ಕೆ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಛತ್ತೀಸ್ ಗಡದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯ ಜಿಲ್ಲಾ ಕೇಂದ್ರದಿಂದ 10 ಕಿ.ಮೀ. ದೂರದಲ್ಲಿರುವ ಸೆಕ್ಟರ್ 5ರ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಗುವು ಹಾಲು ಬೇಕೆಂದು ತೀವ್ರವಾಗಿ ಅತ್ತಿದ್ದರಿಂದ ಕೋಪಗೊಂಡು ಮಹಿಳೆ ಮಗುವಿನ ಮೇಲೆ ಮಾರಣಾಂತಿಕವಾದ ಹಲ್ಲೆ ನಡೆದ್ದಾಳೆ ಎಂದು ಹೇಳಲಾಗಿದೆ.

ಹಾಲಿಗಾಗಿ ಮಗು ತೀವ್ರವಾಗಿ ಹಠ ಮಾಡುತ್ತಿತ್ತು. ಇದರಿಂದ ಬೇಸತ್ತ ಮಹಿಳೆ ಮಗುವಿನ ತಲೆಯನ್ನು ನೆಲಕ್ಕೆ ಚಚ್ಚಿದ್ದಾಳೆ. ಇದರ ಪರಿಣಾಮವಾಗಿ ಮಗುವಿನ ತಲೆಗೆ ಗಂಭೀರವಾದ ಏಟು ಬಿದ್ದಿತ್ತು. ಮಗುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಮಗುವನ್ನ ಹತ್ಯೆ ಮಾಡಿದ ಮಹಿಳೆ 2014ರಿಂದಲೂ ಮಾನಸಿಕ ರೋಗದಿಂದ ಬಳಲುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ಮಾಹಿತಿ ಲಭ್ಯವಾಗಿದೆ. ತನ್ನ ಮಾನಸಿಕ ಕಾಯಿಲೆಗಾಗಿ ಮಹಿಳೆ ಈಗಾಗಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸದ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಗೆಳೆಯನ ಜೊತೆಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ನಟಿ ಕಾರು ಅಪಘಾತದಲ್ಲಿ ದಾರುಣ ಸಾವು!

ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ!

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಪೂಜೆ ಮುಗಿಸಿ ಮನೆಗೆ ಹೋಗುತ್ತಿದ್ದ ಅರ್ಚಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ!

ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ!

ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಗ್ಯಾಸ್ ಸಿಲಿಂಡರ್ ಸಿಡಿದು ಮೂವರು ಸಾವು

ಇತ್ತೀಚಿನ ಸುದ್ದಿ