ಅಂಬೇಡ್ಕರ್ ಬದುಕಿದ್ದರೆ,  ಗಾಂಧಿಯನ್ನು ಗೋಡ್ಸೆ ಕೊಂದಂತೆ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿದ್ದ ಕಿಡಿಗೇಡಿ ಅರೆಸ್ಟ್ - Mahanayaka
4:18 PM Thursday 12 - December 2024

ಅಂಬೇಡ್ಕರ್ ಬದುಕಿದ್ದರೆ,  ಗಾಂಧಿಯನ್ನು ಗೋಡ್ಸೆ ಕೊಂದಂತೆ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿದ್ದ ಕಿಡಿಗೇಡಿ ಅರೆಸ್ಟ್

hamara prasad
11/02/2023

ಹೈದರಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ ತೆಲಂಗಾಣ ಮೂಲದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಮಾರಾ ಪ್ರಸಾದ್ ಎಂಬಾತ ಈ ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅಂಬೇಡ್ಕರ್ ಬದುಕಿದ್ದರೆ,  ಗಾಂಧಿಯನ್ನು ಗೋಡ್ಸೆ ಕೊಂದಂತೆ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿದ್ದಾನೆ.

ಅಂಬೇಡ್ಕರ್ ಅವರ ಕುರಿತ ಪುಸ್ತಕವೊಂದನ್ನು ಹಿಡಿದುಕೊಂಡು ಈತ ಈ ಹೇಳಿಕೆ ನೀಡಿದ್ದು, ಈ ಬಗ್ಗೆ ದೇಶಾದ್ಯಂತ ಆಕ್ರೋಶ ಸೃಷ್ಟಿಯಾಗುತ್ತಿದ್ದಂತೆಯೇ ಕಿಡಿಗೇಡಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ಧ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ತೆಲಂಗಾಣ ಘಟಕದ ಮುಖ್ಯಸ್ಥ ಆರ್.ಎಸ್.ಪ್ರವೀಣ್ ಕುಮಾರ್ ಅವರು ದೂರು ನೀಡಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಆರೋಪಿಯು ಮನುವಾದಿ ಸಂಘಟನೆಯೊಂದರ ನಾಯಕ ಎಂದು ಹೇಳಲಾಗುತ್ತಿದೆ.  ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಎ ಮತ್ತು 505(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ