ಹಣಕಾಸಿನ ವಿಚಾರಕ್ಕೆ ಪತಿ, ಮಾವನಿಂದ ಮಹಿಳೆಯ ಕೊಲೆ
ನೆಲಮಂಗಲ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಮತ್ತು ಮಾವ ಇಬ್ಬರು ಸೇರಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರಿನ ದಿಬ್ಬೂರು ಮೂಲದ ರೇಖಾ (30) ಮೃತ ಮಹಿಳೆ. ಈಕೆಯನ್ನು 2 ವರ್ಷದ ಹಿಂದೆ ದಾಬಸ್ ಪೇಟೆಯ ಗಿರೀಶ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯಾದ ಕೆಲವು ತಿಂಗಳ ಬಳಿಕ ಗಿರೀಶ್ ಮತ್ತು ಮಾವ ನಾರಾಯಣಪ್ಪ ರೇಖಾಗೆ ಹಣದ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಕೊಲೆಯಾಗುವ ಮುನ್ನ ರೇಖಾ ಪೋಷಕರಿಗೆ ಕರೆ ಮಾಡಿ ನಮ್ಮ ಮನೆಗೆ ಬೇಗ ಬನ್ನಿ ಎಂದಿದ್ದು, ಅದರಂತೆ ರೇಖಾ ಮನೆಗೆ ಬಂದು ನೋಡಿದಾಗ ಮಗಳು ಸಾವನ್ನಪ್ಪಿರುವುದು ತಿಳಿದು ಬಂದಿದೆ. ತಕ್ಷಣ ಪೋಷಕರು ದಾಬಸ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಆರೋಪಿಗಳಾದ ಗಿರೀಶ್ ಮತ್ತು ಆಕೆಯ ಮಾವ ನಾರಾಯಣಪ್ಪನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು
ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ
ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಬೇಕಿದೆ | ಪ್ರಧಾನಿ ಮೋದಿ
ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ
ಹಿಜಬ್-ಕೇಸರಿ ವಿವಾದ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ; ನಟಿ ಖುಷ್ಬೂ