ಹಾನಗಲ್ ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಮುಖಭಂಗವಾಗಿದೆ. ಇನ್ನೊಂದೆಡೆ ಸಿಂದಗಿಯಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಸಾಧಿಸಿದ್ದಾರೆ.
ಹಾನಗಲ್ ನಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸ್ ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ ನಿಂದ ನಿಯಾಜ್ ಶೇಖ್ ಸ್ಪರ್ಧಿಸಿದ್ದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸ್ಪರ್ಧಿಸಿದ್ದರು.
ಬೆಳಿಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಿತ್ತು. ಒಂದೆಡೆ ಬಿಜೆಪಿ ಹಾಗೂ ಮತ್ತೊಂದೆಡೆ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇನ್ನೊಂದಡೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಸೋಲನುಭವಿಸಿದ್ದು, ಜೆಡಿಎಸ್ ನಿರೀಕ್ಷೆಗಳೆಲ್ಲವೂ ಸುಳ್ಳಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka