ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಧಿಕೃತವಾಗಿ ಸೂಚಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಮಾನೆ ಅವರಿಗೆ ಹಾನಗಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದ್ದು, ಅಶೋಕ್ ಮನಗೂಳಿಗೆ ಸಿಂದಗಿ ಟಿಕೆಟ್ ನೀಡಿ ಸೋನಿಯಾ ಗಾಂಧಿ ಅವರು ಘೋಷಣೆ ಮಾಡಿದ್ದಾರೆ. ಕಳೆದ ಬಾರಿ ಹುಣಸೂರ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಮತ್ತೆ ಟಿಕೆಟ್ ನೀಡಿದೆ.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಉಪ ಚುನಾವಣೆಯ ಟಿಕೆಟ್ ಘೋಷಣೆ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾ ಹೊಂದಿದೆ | ಹೆಚ್.ಡಿ.ಕುಮಾರಸ್ವಾಮಿ
ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ!
‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ
ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!




























