ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು
ವಾಷಿಂಗ್ಟ್ ನ್ : ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿಯೋರ್ವರು ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ.
ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್ ನ 57 ವರ್ಷದ ಡೇವಿಡ್ ಬೆನೆಟ್ ಗೆ ಜ. 7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಯಾದ ಮೂರು ದಿನಗಳ ನಂತರ ರೋಗಿಯು ಚೇತರಿಸಿಕೊಂಡಿದ್ದರು. ಅವರಿಗೆ ಅಳವಡಿಸಲಾದ ಹೃದಯ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ, ಮಾ. 8ರಂದು ವ್ಯಕ್ತಿ ಸಾವನ್ನಪ್ಪಿದ್ದಾರೆ.
ಯುನಿವರ್ಸಿಟಿ ಆಫ್ ಮೇರಿಲ್ಯಾಂಡ್ ಮೆಡಿಸಿನ್ ತಂಡವು ಮನುಷ್ಯನಿಗೆ ಮೊದಲ ಬಾರಿಗೆ ಹಂದಿಯ ಹೃದಯ ಕಸಿ ಮಾಡಿತ್ತು. ಹೊಸ ಜೀನ್ ಎಡಿಟಿಂಗ್ ಉಪಕರಣಗಳಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ಶಸ್ತ್ರ ಚಿಕಿತ್ಸೆಯಿಮದ ಭಿನ್ನ ವಗ್ದ ಅಂಗಾಂಗ ದಾನದ ಸಾಧ್ಯತೆಗೆ ದೊಡ್ಡ ಮುನ್ನಡೆಯಾಗಿತ್ತು. ಭವಿಷ್ಯದಲ್ಲಿ ದಾನಕ್ಕೆ ಲಭ್ಯವಿರುವ ಮಾನವ ಅಂಗಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಬಹುದು ಎಂಬ ಭರವಸೆಯನ್ನು ಮೂಡಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೊಸೆ ಮೇಲಿನ ಕೋಪ: ಮೊಮ್ಮಗಳನ್ನು ಬಲಿ ಪಡೆದ ಅತ್ತೆ
ಪಂಜಾಬ್ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
ಭೀಕರ ರಸ್ತೆ ಅಪಘಾತ: ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು
ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ