ದ್ವೇಷಾತ್ಮಕ, ವಿವಾದಾತ್ಮಕ, ಪರಿಸರ ಹಾನಿಕಾರಕ ಫ್ಲೆಕ್ಸ್ ವಿರುದ್ಧ ಕ್ರಮಕ್ಕೆ ಸೂಚನೆ
ಮಂಗಳೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.
ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್‍ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು. ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.
ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‍ಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka