'ಹರ್ ಘರ್ ತಿರಂಗಾ' ಅಭಿಯಾನ: ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ - Mahanayaka
12:30 PM Tuesday 4 - February 2025

‘ಹರ್ ಘರ್ ತಿರಂಗಾ’ ಅಭಿಯಾನ: ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

raghupati bhat
10/08/2022

ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ‌ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಅವರು, ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಮೇನೇಜಿಂಗ್ ಟ್ರಸ್ಟಿ ಪಿ.ವಿ. ಶೆಣೈ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್.ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರದೀಪ್ ರಾವ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ