ಚಿನ್ನಾಭರಣ ಖರೀದಿಸಿ ವಂಚನೆ ಪ್ರಕರಣ: ಹರೀಶ್ ಗೌಡ ಮತ್ತು ಪತಿ ಬಿಡುಗಡೆ
![aishwarya gowda](https://www.mahanayaka.in/wp-content/uploads/2025/01/aishwarya-gowda.jpg)
ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ 14.600 ಕೆ.ಜಿ. ಚಿನ್ನಾಭರಣ ಖರೀದಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದ್ದು, ಮಂಗಳವಾರ ರಾತ್ರಿಯೇ ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ.
ಐಶ್ವರ್ಯ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಿಗೆ 9ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಆದರೆ, ಐಶ್ವರ್ಯ ಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆಹೋಗಿದ್ದು, ಜಾಮೀನು ಮಂಜೂರಾದ ಹಿನ್ನೆಲೆ ಮಂಗಳವಾರ ರಾತ್ರಿಯೇ ಪೊಲೀಸ್ ಕಸ್ಟಡಿಯಿಂದ ಬಿಡುಗಡೆಗೊಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7