ಹರೀಶ್ ಪೂಂಜಾ ಮೇಲೆ ದಾಳಿ: ಪುಕ್ಕಟೆ ಪ್ರಚಾರ ಪಡೆಯುವ ತಂತ್ರ: ರಮೇಶ್ ಕಾಂಚನ್ ಆರೋಪ
ಉಡುಪಿ: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ತಲವಾರು ದಾಳಿ ನಡೆದಿದೆ ಎಂಬ ವಿಷಯದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂಬ ಸುದ್ದಿ ಪ್ರಕಟವಾಗುತ್ತಿರುವಾಗಲೇ ಕೆಲವು ಬಿಜೆಪಿಯ ನಾಯಕರು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅಶಾಂತಿ ಹರಡುವ ದ್ವೇಷದ ಮಾತುಗಳನ್ನು ಸುದ್ದಿವಾಹಿನಿ ಮೂಲಕ ಪ್ರಕಟಗೊಳಿಸಿದ್ದು ಅವರಿಗೆ ತಮ್ಮದೇ ಸರಕಾರದ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಇಲ್ಲವೋ ಎಂಬ ಸಂಶಯ ಮೂಡುತ್ತದೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ.
ಘಟನೆ ನಡೆದು ಅದರ ತನಿಖಾ ಪ್ರಕ್ರಿಯೆ ಪ್ರಾರಂಭವಾಗುವ ಮುನ್ನವೇ ಅವಸರದಿಂದ ಪತ್ರಿಕಾ ಪ್ರಕಟಣೆ ನೀಡುವುದು ಬಿಜೆಪಿಯ ಕೆಲವು ನಾಯಕರ ಹತಾಶ ಪ್ರಯತ್ನ ಹಾಗೂ ಇದೊಂದು ಪುಕ್ಕಟೆ ಪ್ರಚಾರ ಪಡೆಯುವ ತಂತ್ರ ಎಂದು ಅವರು ಹೇಳಿದ್ದಾರೆ.
ಮಂಗಳೂರಿನ ದಕ್ಷ ಪೊಲೀಸ್ ಅಧಿಕಾರಿಗಳು ಇಂತಹ ಗಂಭೀರ ಹಾಗೂ ಸೂಕ್ಷ್ಮ ವಿಷಯವನ್ನು ಕೈಗೆತ್ತಿಕೊಂಡು ಪ್ರಕರಣವನ್ನು ಭೇದಿಸಿ ಸತ್ಯಾಸತ್ಯತೆಯ ವರದಿಯನ್ನು ಘಟನೆ ನಡೆದ 24 ಗಂಟೆಗಳ ಒಳಗೆ ಸಾರ್ವಜನಿಕರ ಎದುರು ಇಟ್ಟಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರ ವಿಶ್ವಾಸ ಹೆಚ್ಚಾಗಿದೆ ಹಾಗೂ ಪ್ರಕರಣವನ್ನು ಭೇದಿಸಿ ಸತ್ಯವನ್ನು ಹೊರಹಾಕಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸು ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka