ಹರೀಶ್ ಪೂಂಜಾ ಕಾರಿನ ಮೇಲೆ ದಾಳಿ ಕೇಸ್’ಗೆ ಹೊಸ ಟ್ವಿಸ್ಟ್!: ವಿಡಿಯೋ ನೋಡಿ
ಬೆಳ್ತಂಗಡಿ: ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿ ತಲವಾರು ಝಳಪಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇರಲಿಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka