ಫಾಝಿಲ್ ಹತ್ಯೆ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಹರ್ಷಿತ್ ಗೆ ಜೆಎಂಎಫ್ ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಆಗಸ್ಟ್ 17ರಂದು ಬಂಧಿಸಿದ್ದರು. ಪೊಲೀಸರು ಆರೋಪಿ ಹರ್ಷಿತನನ್ನು ಎರಡನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮಂಗಳೂರು ನಗರದ ಸುರತ್ಕಲ್ ನ ಮಾರುಕಟ್ಟೆಯ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಮತ್ತು ಕೃತ್ಯ ಎಸಗಲು ಕಾರು ನೀಡಿದ್ದ ಓರ್ವನನ್ನು ಬಂಧಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka