ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆ
ಗುಜರಾತ್ ;ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಜೂನ್ 2 ರಂದು ಹಾರ್ದಿಕ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಕಳೆದ ದಿನ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಈಗ ಬಂದಿರುವ ವರದಿಗಳು ಇದಕ್ಕೆ ವ್ಯತಿರಿಕ್ತವಾಗಿವೆ.
ಗುಜರಾತ್ ನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ್ ಪಟೇಲ್ ಇದೇ ತಿಂಗಳ 28ರಂದು ಪಕ್ಷ ತೊರೆದಿದ್ದರು. ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ನೀಡಿದ ಹಾರ್ದಿಕ್ ಪಟೇಲ್ ಅವರು ಗುಜರಾತ್ ಜನತೆಗಾಗಿ ಕೆಲಸ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.ನರೇಶ್ ಪಟೇಲ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಕ್ರಮದಿಂದ ಹಾರ್ದಿಕ್ ಪಟೇಲ್ ಅತೃಪ್ತರಾಗಿದ್ದರು.
ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಹಾರ್ದಿಕ್, ಈ ಹಿಂದೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹುದ್ದೆಯನ್ನು ಟ್ವಿಟರ್ ನಿಂದ ತೆಗೆದು ಹಾಕಿದ್ದರು. ಆದರೆ ಕೆಲ ದಿನಗಳ ಹಿಂದೆ ರಾಹುಲ್ ಗಾಂಧಿ ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಹಾರ್ದಿಕ್ ಬಂದಿದ್ದರು. ಹಾರ್ದಿಕ್ ಪಟೇಲ್ 2019 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆರ್ಯನ್ ಖಾನ್ ಪ್ರಕರಣದ ವಿವಾದಿತ ಅಧಿಕಾರಿ ಸಮೀರ್ ವಾಂಖೆಡೆ ವರ್ಗಾವಣೆಯಾಗಿದ್ದೆಲ್ಲಿಗೆ?
ಪತಿ ಜೊತೆ ಜಗಳ: ತನ್ನ ಆರು ಮಕ್ಕಳನ್ನು ಬಾವಿಗೆಸೆದ ಪಾಪಿ ತಾಯಿ!
ಹಣ ನೀಡಿ ನಿಮ್ಮನ್ನು ಸಚಿವರಾಗಿ ಮಾಡ್ತೇವೆ ಅಂದಿದ್ರು: ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ
ಮಳಲಿ ಮಸೀದಿ ವಿವಾದಕ್ಕೆ ಎಸ್ ಡಿಪಿಐ ಬಳಿಕ ಕಲ್ಲಡ್ಕ ಪ್ರಭಾಕರ್ ಭಟ್ ಎಂಟ್ರಿ!
ಅತಿಯಾಗಿ ಟೀ ಕುಡಿಯುತ್ತೀರಾ? ಹಾಗಿದ್ದರೆ, ಕಾದಿದೆ ಅಪಾಯ!