ಹರ್ಯಾಣ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ - Mahanayaka
5:27 PM Monday 16 - September 2024

ಹರ್ಯಾಣ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

06/09/2024

ಹರ್ಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿ ಬಿಡುಗಡೆಯಾಗುತ್ತಿಲೇ ರಾಜ್ಯ ಬಿಜೆಪಿಯ ಹಲವಾರು ಮಹಿಳಾ ನಾಯಕರು, ಕ್ಯಾಬಿನೆಟ್ ಸಚಿವರು, ಹಾಲಿ ಶಾಸಕರು ಹಾಗೂ ಒಬಿಸಿ ಸಮುದಾಯದ ನಾಯಕರು ತಮ್ಮ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ.

ತಮ್ಮದೇ ಪಕ್ಷದ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.
67 ಕ್ಷೇತ್ರಗಳಿಗೆ ಪ್ರಕಟವಾಗಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಬರೋಬ್ಬರಿ 40 ಕ್ಷೇತ್ರಗಳಲ್ಲಿ ಹಿಂದಿನ ಅಭ್ಯರ್ಥಿಗಳು ಮತ್ತು ಹಾಲಿ ಶಾಸಕರನ್ನು ಕೈಬಿಡಲಾಗಿದೆ. ಆ ಕ್ಷೇತ್ರಗಳಲ್ಲಿ ಹೊಸಬರಿಕೆ ಟಿಕೆಟ್ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ 9 ಹಾಲಿ ಶಾಸಕರನ್ನು ಕೈಬಿಡಲಾಗಿದೆ. ಇನ್ನೂ, 33 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಬೇಕಿದ್ದು, ಅವರಲ್ಲಿಯೂ ಹಲವರಿಗೆ ಕೋಕ್ ನೀಡುವ ಸಾಧ್ಯತೆಗಳಿವೆ.

2014ರಿಂದ ಸತತ ಎರಡು ಅವಧಿಗಳಲ್ಲಿ ಹರಿಯಾಣದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, ಮತ್ತೊಮ್ಮೆ ಅಧಿಕಾರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿದೆ. ಅದಾಗ್ಯೂ, ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್‌ನಲ್ಲಿ ಪುನಾರಾವರ್ತನೆಯಾಗುತ್ತಿರುವ ಪ್ರಾಬಲ್ಯವು ಬಿಜೆಪಿಗೆ ಭಾರೀ ಸವಾಲಾಗಿ ಎದುರಾಗಿದೆ.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ