ಹರ್ಯಾಣದಲ್ಲಿ ಚುನಾವಣಾ ಕಾವು: ಶೇ.9.5ರಷ್ಟು ಮತದಾನ
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್, ಜೆಜೆಪಿಯ ದುಶ್ಯಂತ್ ಚೌಟಾಲಾ ಮತ್ತು 1,000 ಕ್ಕೂ ಹೆಚ್ಚು ಇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಹರ್ಯಾಣದಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇ.9.5ರಷ್ಟು ಮತದಾನವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಮೇಲೆ ಕಣ್ಣಿಟ್ಟಿದ್ದರೆ, ಕಾಂಗ್ರೆಸ್ ಒಂದು ದಶಕದ ನಂತರ ರಾಜ್ಯದಲ್ಲಿ ಪುನರಾಗಮನದ ನಿರೀಕ್ಷೆಯಲ್ಲಿದೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್ಎಲ್ಡಿ), ಬಹುಜನ ಸಮಾಜ ಪಕ್ಷ (ಬಿಎಸ್ಪಿ), ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್ ಸಮಾಜ ಪಕ್ಷ (ಎಎಸ್ಪಿ) ಇತರ ಪ್ರಮುಖ ಸ್ಪರ್ಧಿಗಳಾಗಿವೆ.
ಬಿಜೆಪಿಯ ಪ್ರಚಾರದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಅವರು ನಾಲ್ಕು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ್ದರು. ಅಲ್ಲಿ ಅವರು ಹಲವಾರು ವಿಷಯಗಳ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು. ಹಾಗೆಯೇ ರಾಮ ಮಂದಿರ ವಿಷಯ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth