‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್‌ ಗಳು ಪತ್ತೆ: ಭಾರೀ ವಿವಾದ - Mahanayaka

‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್‌ ಗಳು ಪತ್ತೆ: ಭಾರೀ ವಿವಾದ

bamby
31/07/2023

ಬಾಂಬೆ ಐಐಟಿ ಕಾಲೇಜಿನ ಕ್ಯಾಂಟೀನ್‌ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್‌ಗಳು ಪತ್ತೆಯಾಗಿದೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಐಐಟಿ (ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ) ವಿದ್ಯಾರ್ಥಿಗಳು ಆಹಾರದ ವಿಚಾರದಲ್ಲಿ ತಾರತಮ್ಯ ಎಸಗುವ ಪೋಸ್ಟರ್ ವಿರುದ್ಧ ಧ್ವನಿ ಎತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕೇವಲ ಸಸ್ಯಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಲ್ಲದೇ ಈ ಪೋಸ್ಟರ್‌ ಅನ್ನು ಕಳೆದ ವಾರ ಹಾಕಲಾಗಿದೆ ಎನ್ನಲಾಗಿದೆ.

ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಕಾರ್ಯಕರ್ತರು ಪೋಸ್ಟರ್‌ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದು, ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ.ಅದಾಗ್ಯೂ, ಪೋಸ್ಟರ್ ಯಾರು ಅಂಟಿಸಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿ ಹೇಳಿದೆ.

ನಮ್ಮಲ್ಲಿ ಆಹಾರ ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕತೆ ಇಲ್ಲ, ಯಾರು ಎಲ್ಲಿ ಬೇಕಾದರೂ ಕುಳಿತು ಆಹಾರ ಸೇವಿಸಬಹುದು ಎಂದು ಆಡಳಿತ ಮಂಡಳಿ ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ