ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹ: ಹೈಕೋರ್ಟ್ ಆದೇಶ

Prajwal Revanna
01/09/2023

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಇಂದು (ಸೆ.1) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version