ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು - Mahanayaka
11:07 AM Wednesday 5 - February 2025

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು

charmadi
16/12/2024

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ 112  ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ.

ಈ ವೇಳೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ,ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.

ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ.ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ