ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಸಾವಿಗೆ ಶರಣು

ಬೆಂಗಳೂರು: ಪ್ರತಿಭಟನೆಗೆ ಬಂದಿದ್ದ ಶಿಕ್ಷಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಂಕರಪ್ಪ ಬೋರಡ್ಡಿ(47) ಮೃತಪಟ್ಟ ಶಿಕ್ಷಕ. ಶಂಕರಪ್ಪ ಬೋರಡ್ಡಿ ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಶಿಕ್ಷಕ ಎನ್ನಲಾಗಿದೆ. ಪಿಂಚಣಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದರು.
ಈ ಮಧ್ಯೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಂಕರಪ್ಪ ಬೋರಡ್ಡಿ ರಾತ್ರಿ ವೇಳೆ ರೈಲ್ವೆ ನಿಲ್ದಾಣಕ್ಕೆ ಹೋಗಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಶಂಕರಪ್ಪ ಬೋರಡ್ಡಿ ಶವ ಪತ್ತೆಯಾಗಿದ್ದು, ಶಾಲಾ ಶಿಕ್ಷಕನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw